Webdunia - Bharat's app for daily news and videos

Install App

T20 Women's WC: ಸ್ಮೃತಿ ಮಂಧಾನಾ ಮೇಕಪ್ ಮಾಡಿಕೊಳ್ಳಲಿಕ್ಕಷ್ಟೇ ಲಾಯಕ್ಕು

Krishnaveni K
ಸೋಮವಾರ, 14 ಅಕ್ಟೋಬರ್ 2024 (10:11 IST)
Photo Credit: X
ದುಬೈ: ಟಿ20 ಮಹಿಳಾ ವಿಶ್ವಕಪ್ ನಲ್ಲಿಆಸ್ಟ್ರೇಲಿಯಾ ವಿರುದ್ಧ ನಿರ್ಣಾಯಕ ಪಂದ್ಯ ಸೋತ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ಅಭಿಮಾನಿಗಳು ಕ್ವೀನ್ ಎಂದು ಕರೆಯಿಸಿಕೊಳ್ಳುವ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನಾ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಿನ್ನೆ ಕೊನೆಯ ಲೀಗ್ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತಕ್ಕೆ ನಾಕೌಟ್ ಹಂತಕ್ಕೇರುವ ಅವಕಾಶವಿತ್ತು. ಆದರೆ ನಿನ್ನೆಯ ಪಂದ್ಯವನ್ನು 9 ರನ್ ಗಳಿಂದ ತಂಡ ಸೋತಿತು. ನಾಯಕಿ ಹರ್ಮನ್ ಪ್ರೀತ್ ಕೌರ್ ಅರ್ಧಶತಕ ಗಳಿಸಿ ಕೊನೆಯವರೆಗೂ ಕ್ರೀಸ್ ನಲ್ಲಿದ್ದರು. ಆದರೆ ಅವರಿಗೆ ತಕ್ಕ ಸಾಥ್ ಸಿಗದೇ ತಂಡ ಸೋತು ಹೋಯಿತು.

ಅದರಲ್ಲೂ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನಾ ಮತ್ತೊಮ್ಮೆ ಮಹತ್ವದ ಪಂದ್ಯದಲ್ಲಿ ತಂಡಕ್ಕೆ ಕೈಕೊಟ್ಟರು. ನಿನ್ನೆಯ ಪಂದ್ಯದಲ್ಲಿ ಸ್ಮೃತಿ ಬಿರುಸಿನ ಆಟಕ್ಕೆ ಕೈ ಹಾಕಿದ್ದರೆ ಭಾರತ ಕೊನೆಯ ಹಂತದಲ್ಲಿ ಒತ್ತಡಕ್ಕೊಳಗಾಗುತ್ತಿರಲಿಲ್ಲ. ಆದರೆ ಆಧಾರವಾಗಬೇಕಿದ್ದ ಸ್ಮೃತಿ ಟೆಸ್ಟ್ ಶೈಲಿಯಲ್ಲಿ ಬ್ಯಾಟ್ ಮಾಡಿದರು. 12 ಎಸೆತ ಎದುರಿಸಿ ಅವರು ಗಳಿಸಿದ್ದು ಕೇವಲ 6 ರನ್. ಬಳಿಕ ಔಟಾಗಿ ಪೆವಿಲಿಯನ್ ಸೇರಿಕೊಂಡರು.

ಇದರಿಂದ ಅಭಿಮಾನಿಗಳ ಆಕ್ರೋಶ ಕಟ್ಟೆಯೊಡೆದಿದೆ. ಸ್ಮೃತಿ ಕೇವಲ ಮೇಕಪ್ ಮಾಡಿಕೊಳ್ಳಲಿಕ್ಕಷ್ಟೇ ಲಾಯಕ್ಕು ಎಂದು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿದ್ದಾರೆ. ಸೌಂದರ್ಯವೊಂದಿದ್ದರೆ ಸಾಲದು, ಕ್ರಿಕೆಟ್ ನಲ್ಲಿ ಅಗತ್ಯ ಸಂದರ್ಭದಲ್ಲಿ ತಂಡಕ್ಕೆ ತಕ್ಕಂತೆ ಆಡಿದರೆ ಮಾತ್ರ ಬೆಲೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಸ್ಮೃತಿ ಮಹತ್ವದ ಪಂದ್ಯದಲ್ಲಿ ಈ ರೀತಿ ಔಟಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೆ ಏಷ್ಯಾಕಪ್ ನಲ್ಲೂ ಇದೇ ರೀತಿ ಮಾಡಿದ್ದರು. ಹೀಗಾಗಿ ಕೆಲವರು ಸ್ಮೃತಿ ನೀವು ಮಹತ್ವದ ಪಂದ್ಯಗಳಲ್ಲಿ ಆಡದೇ ಇರುವುದು ಭಾರತಕ್ಕೆ ಒಳಿತು ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments