T20 World Cup: ಪಪುವಾ ವಿರುದ್ಧ ತಾನು ಗೆದ್ದ ನ್ಯೂಜಿಲೆಂಡ್ ತಂಡ ಹೊರಹಾಕಿದ ಅಫ್ಘಾನಿಸ್ತಾನ

Krishnaveni K
ಶುಕ್ರವಾರ, 14 ಜೂನ್ 2024 (09:43 IST)
ಟ್ರಿನಿಡಾಡ್: ಟಿ20 ವಿಶ್ವಕಪ್ ನಲ್ಲಿ ಇಂದು ನಡೆದ ಮತ್ತೊಂದು ಪಂದ್ಯದಲ್ಲಿ ದುರ್ಬಲ ಪಪುವಾ ನ್ಯೂಗಿನಿ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದ ಅಫ್ಘಾನಿಸ್ತಾನ ತಂಡ ನ್ಯೂಜಿಲೆಂಡ್ ನ್ನೂ ಟೂರ್ನಿಯಿಂದ ಹೊರಹಾಕಿದೆ.

ಇಂದು ಪಪುವಾ ವಿರುದ್ಧ ಸೋತಿದ್ದರೆ ನ್ಯೂಜಿಲೆಂಡ್ ತಂಡದ ಸೂಪರ್ 8 ರ ಕನಸು ಉಳಿಯುತ್ತಿತ್ತು. ಆದರೆ ಅಫ್ಘಾನ್ ಗೆದ್ದು ಸೂಪರ್ 8 ಕ್ಕೆ ಅರ್ಹತೆ ಪಡೆಯುವುದರೊಂದಿಗೆ ನ್ಯೂಜಿಲೆಂಡ್ ಕನಸು ಕಮರಿ ಹೋಯಿತು. ಕಿವೀಸ್ ಗೆ ಇನ್ನೂ ಎರಡು ಪಂದ್ಯಗಳಿದ್ದರೂ ಅದೀಗ ಔಪಚಾರಿಕವಾಗಿದೆ.

ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಪುವಾ ನ್ಯೂಗಿನಿ ತಂಡ 19.5 ಓವರ್ ಗಳಲ್ಲಿ 95 ರನ್ ಗಳಿಗೆ ಆಲೌಟ್ ಆಯಿತು. ಪಪುವಾ ಪರ ವಿಕೆಟ್ ಕೀಪರ್ ಬ್ಯಾಟಿಗ ಕಿಪ್ಲಿನ್ ಡೊರಿಗಾ 27 ರನ್ ಗಳಿಸಿದರು.  ಅಫ್ಘಾನಿಸ್ತಾನ ಪರ ಫಾರುಕಿ 3, ನವೀನ್ ಉಲ್ ಹಕ್ 2, ನೂರ್ ಅಹ್ಮದ್ 1 ವಿಕೆಟ್ ಕಬಳಿಸಿದರು.

ಈ ಮೊತ್ತ ಬೆನ್ನತ್ತಿದ ಅಫ್ಘಾನಿಸ್ತಾನ ತಂಡ 15.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 101 ಗಳಿಸಿ ಗೆಲುವು ತನ್ನದಾಗಿಸಿಕೊಂಡಿತು. ಅಫ್ಘಾನಿಸ್ತಾನ ಪರ ಗುಲ್ಬಾದಿನ್ ನಯೀಬ್ 49 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಸೂಪರ್ 8 ರ ಹಂತಕ್ಕೆ ಅರ್ಹತೆ ಪಡೆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments