Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್ 2024: ಭಾರತ, ಪಾಕಿಸ್ತಾನ ಪಂದ್ಯದಲ್ಲಿ ಮಳೆಯ ಕಾರುಬಾರಿನ ನಡುವೆ ನಡೆದ ಟಾಸ್

IND vs PAK

Krishnaveni K

ನ್ಯೂಯಾರ್ಕ್ , ಭಾನುವಾರ, 9 ಜೂನ್ 2024 (20:36 IST)
ನ್ಯೂಯಾರ್ಕ್: ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯ ಕಾಟದ ನಡುವೆಯೂ ಟಾಸ್ ನಡೆಸಲಾಗಿದೆ.  ಆದರೂ ಪಂದ್ಯ ತಡವಾಗಿ ಆರಂಭವಾಗಲಿದೆ.

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇದೀಗಷ್ಟೇ ಮಳೆ ಬಿಟ್ಟಿದ್ದು ಕೆಲವೇ ಕ್ಷಣಗಳಲ್ಲಿ ಪಂದ್ಯ ಆರಂಭವಾಗುವ ನಿರೀಕ್ಷೆಯಿದೆ. ಎಲ್ಲವೂ ನಿಗದಿಯಂತೆ ನಡೆದಿದ್ದರೆ 7.30 ಕ್ಕೆ ಟಾಸ್ ನಡೆಯಬೇಕಿತ್ತು. ಆದರೆ ಮೈದಾನ ಒದ್ದೆಯಾಗಿದ್ದರೆ ಟಾಸ್ ವಿಳಂಬವಾಗಿ ನಡೆಯಿತು.

ಭಾರತ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಅಜಂ ಖಾನ್ ಗೆ ವಿಶ್ರಾಂತಿ ನೀಡಲಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.

ಭಾರತ ತಂಡ:  ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಷ್ ದೀಪ್ ಸಿಂಗ್.
ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಂ (ನಾಯಕ), ಉಸ್ಮಾನ್ ಖಾನ್, ಫಕರ್ ಝಮಾನ್,  ಶಹಬಾದ್ ಖಾನ್, ಇಫ್ತಿಕಾರ್ ಅಹಮ್ಮದ್, ಇಮದ್ ವಾಸಿಂ, ಶಾಹಿನ್ ಅಫ್ರಿದಿ,  ಹಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್.

Share this Story:

Follow Webdunia kannada

ಮುಂದಿನ ಸುದ್ದಿ

ಟಿ20 ವಿಶ್ವಕಪ್ 2024: ಭಾರತ, ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ