Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್: ಮೊದಲ ಪಂದ್ಯ ಗೆದ್ದ ಇಂಗ್ಲೆಂಡ್, ಆಸ್ಟ್ರೇಲಿಯಾ

ಟಿ20 ವಿಶ್ವಕಪ್: ಮೊದಲ ಪಂದ್ಯ ಗೆದ್ದ ಇಂಗ್ಲೆಂಡ್, ಆಸ್ಟ್ರೇಲಿಯಾ
ದುಬೈ , ಭಾನುವಾರ, 24 ಅಕ್ಟೋಬರ್ 2021 (09:09 IST)
ದುಬೈ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ನಿನ್ನೆ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಮ್ಮ ತಮ್ಮ ಪಂದ್ಯಗಳನ್ನು ಗೆದ್ದುಕೊಂಡಿದೆ.

ದ.ಆಫ್ರಿಕಾ ವಿರುದ್ಧ ಮೊದಲ ಪಂದ್ಯವಾಡಿದ ಆಸ್ಟ್ರೇಲಿಯಾ ಈ ಪಂದ್ಯವನ್ನು 5 ವಿಕೆಟ್ ಗಳಿಂದ ಗೆದ್ದು ಶುಭಾರಂಭ ಮಾಡಿದೆ. ಮೊದಲು ಬ್ಯಾಟಿಂಗ್ ಆಫ್ರಿಕಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಈ ಮೊತ್ತವನ್ನು 19.4 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿ ಗೆಲುವಿನ ಶುಭಾರಂಭ ಮಾಡಿತು.

ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್ ವೆಸ್ಟ್ ಇಂಡೀಸ್ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 14.2 ಓವರ್ ಗಳಲ್ಲಿ ಜುಜುಬಿ 55 ರನ್ ಗಳಿಗೆ ಆಲೌಟ್ ಆಯಿತು. ಈ ಮೊತ್ತವನ್ನು ಇಂಗ್ಲೆಂಡ್ 8.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿ ಪಂದ್ಯ ಗೆದ್ದುಕೊಂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಟಿ20 ವಿಶ್ವಕಪ್: ಟೀಂ ಇಂಡಿಯಾ ಆಡುವ ಬಳಗ ಹೀಗಿರಬಹುದು