Publish Date: Mon, 08 Nov 2021 (08:46 IST)
Updated Date: Mon, 08 Nov 2021 (09:00 IST)
ದುಬೈ: ಟಿ20 ವಿಶ್ವಕಪ್ 2021 ರಲ್ಲಿ ಟೀಂ ಇಂಡಿಯಾ ಇಂದು ಅಂತಿಮ ಲೀಗ್ ಪಂದ್ಯವನ್ನು ಕ್ರಿಕೆಟ್ ಶಿಶು ನಮೀಬಿಯಾ ವಿರುದ್ಧ ಆಡಲಿದೆ. ಈ ಪಂದ್ಯದೊಂದಿಗೆ ಟೀಂ ಇಂಡಿಯಾ ಈ ವಿಶ್ವಕಪ್ ಅಭಿಯಾನ ಕೊನೆಗೊಳ್ಳಲಿದೆ.
ನಿನ್ನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ಸಾಧಿಸುವುದರೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಹಾದಿ ಬಂದ್ ಆಗಿದೆ. ಇದರೊಂದಿಗೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿ ನಿರಾಸೆ ಅನುಭವಿಸಿದೆ.
ಕಳೆದ ಪಂದ್ಯದಲ್ಲಿ ಸ್ಕಾಟ್ ಲೆಂಡ್ ವಿರುದ್ಧ ಭರ್ಜರಿ ಜಯ ಗಳಿಸಿದ್ದ ಭಾರತ ಅದೇ ತಂಡವನ್ನು ಇಲ್ಲಿ ಕಣಕ್ಕಿಳಿಸಬಹುದು. ಈ ಪಂದ್ಯವೂ ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30 ಕ್ಕೆ ಆರಂಭವಾಗಲಿದೆ.