ದುಬೈ: ಟಿ20 ವಿಶ್ವಕಪ್ ಗೆ ಪೂರ್ವಭಾವಿಯಾಗಿ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಂದು ಗೆಲುವು ಸಂಪಾದಿಸಿದೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯವನ್ನು ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳ ಸಾಧಾರಣ ಮೊತ್ತ ಕಲೆ ಹಾಕಿತು.
ಈ ಮೊತ್ತವನ್ನು ಬೆನ್ನತ್ತಿದ ಟೀಂ ಇಂಡಿಯಾಗೆ ಆರಂಭಿಕ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಎಚ್ಚರಿಕೆಯ ಆರಂಭ ಒದಗಿಸಿಕೊಟ್ಟರು. ರಾಹುಲ್ 39 ರನ್ ಗಳಿಸಿದ್ದಾಗ ಔಟಾದರು. ಆದರೆ ರೋಹಿತ್ 60 ರನ್ ಗಳಿಸಿದ್ದಾಗ ಗಾಯಗೊಂಡು ನಿರ್ಗಮಿಸಿದರು. ಸೂರ್ಯಕುಮಾರ್ ಯಾದವ್ ಅಜೇಯ 38, ಹಾರ್ದಿಕ್ ಪಾಂಡ್ಯ ಅಜೇಯ 14 ರನ್ ಗಳಿಸಿ ಟೀಂ ಇಂಡಿಯಾಕ್ಕೆ 17.5 ಓವರ್ ಗಳಲ್ಲಿ ಗೆಲುವು ಕೊಡಿಸಿದರು. ಅಂತಿಮವಾಗಿ ಭಾರತ 1 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ನಿನ್ನೆಯ ಪಂದ್ಯದಲ್ಲಿ ರೋಹಿತ್ ನಾಯಕರಾಗಿದ್ದರು.