Webdunia - Bharat's app for daily news and videos

Install App

TATA WPL 2025: ಸೋಲುತ್ತಿದ್ದ ಪಂದ್ಯವನ್ನು ಆರ್ ಸಿಬಿ ಗೆಲ್ಲಲು ಕಾರಣವಾಗಿದ್ದೇ ಇವರು

Krishnaveni K
ಶನಿವಾರ, 15 ಫೆಬ್ರವರಿ 2025 (07:50 IST)
ವಡೋದರಾ: ಡಬ್ಲ್ಯುಪಿಎಲ್ 3 ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್ ಸಿಬಿ ರೋಚಕ ಗೆಲುವು ಕಂಡಿದೆ. ಸೋಲುತ್ತಿದ್ದ ಪಂದ್ಯವನ್ನು ಆರ್ ಸಿಬಿ ಗೆಲ್ಲಲು ಕಾರಣವಾಗಿದ್ದು ಈ ಇಬ್ಬರು ಆಟಗಾರ್ತಿಯರು.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 20 ಓವರ್ ಗಳಲ್ಲಿ 201 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಡಬ್ಲ್ಯುಪಿಎಲ್ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿದ ಉದಾಹರಣೆಯೇ ಇರಲಿಲ್ಲ.  ಆದರೆ ಆರ್ ಸಿಬಿ 18.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು202 ರನ್ ಗಳಿಸುವ ಮೂಲಕ 6 ವಿಕೆಟ್ ಗಳ ಗೆಲುವು ಸಾಧಿಸಿ ಇತಿಹಾಸ ಬರೆಯಿತು. ಡಬ್ಲ್ಯುಪಿಎಲ್ ನಲ್ಲಿ ಗರಿಷ್ಠ ರನ್ ಚೇಸ್ ಮಾಡಿದ ದಾಖಲೆ ಮಾಡಿತು.

ಇದಕ್ಕೆ ಕಾರಣವಾಗಿದ್ದು ರಿಚಾ ಘೋಷ್ ಮತ್ತು ಕನಿಕಾ ಅಹುಜಾ. ಒಂದು ಹಂತದಲ್ಲಿ 109 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನ ಭೀತಿಯಲ್ಲಿದ್ದ ಆರ್ ಸಿಬಿಗೆ ಬಲ ನೀಡಿದ್ದು ರಿಚಾ ಘೋಷ್ ಮತ್ತು ಕನಿಕಾ ಬ್ಯಾಟಿಂಗ್. ಇಬ್ಬರೂ 5 ನೇ ವಿಕೆಟ್ ಗೆ ಮುರಿಯದ 93 ರನ್ ಗಳ ಜೊತೆಯಾಟವಾಡಿದರು.

ಇದರಲ್ಲಿ ರಿಚಾ ಘೋಷ್ ಕೊಡುಗೆ ದೊಡ್ಡದು. ಒಟ್ಟು 27 ಎಸೆತ ಎದುರಿಸಿದ ರಿಚಾ 7 ಬೌಂಡರಿ, 4 ಸಿಕ್ಸರ್ ಗಳೊಂದಿಗೆ ಅಜೇಯ 64 ರನ್ ಚಚ್ಚಿದರು. ಅವರಿಗೆ ಸಾಥ್ ನೀಡಿದ ಕನಿಕಾ ಕೇವಲ 13 ಎಸೆತಗಳಲ್ಲಿ 30 ರನ್ ಸಿಡಿಸಿದರು. ಇವರಿಬ್ಬರ ಅಬ್ಬರದ ಬ್ಯಾಟಿಂಗ್ ನಿಂದಾಗಿ ಆರ್ ಸಿಬಿ ನಂಬಲಸಾಧ್ಯ ಗೆಲುವು ತನ್ನದಾಗಿಸಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments