Publish Date: Sat, 04 Mar 2023 (18:54 IST)
Updated Date: Sat, 04 Mar 2023 (18:55 IST)
ಮುಂಬೈ: ಮಹಿಳೆಯರ ಚೊಚ್ಚಲ ಆವೃತ್ತಿಯ ಐಪಿಎಲ್ ಗೆ ಡಿ ವೈ ಪಾಟೀಲ್ ಮೈದಾನದಲ್ಲಿ ಅದ್ಭುತ ಚಾಲನೆ ಸಿಕ್ಕಿದೆ.
ಮೊದಲ ಪಂದ್ಯಕ್ಕೆ ಮುನ್ನ ಬಿಸಿಸಿಐ ಅದ್ಧೂರಿ ಉದ್ಘಾಟನಾ ಸಮಾರಂಭ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ಕೃತಿ ಸನನ್ ನೃತ್ಯ ಕಾರ್ಯಕ್ರಮ, ಎ.ಪಿ.ಧಿಲ್ಲೋನ್ ಪಂಜಾಬಿ ಹಾಡುಗಳ ಮೂಲಕ ನೆರೆದಿದ್ದವರನ್ನು ರಂಜಿಸಿದರು.
ಕಾರ್ಯಕ್ರಮದ ನೇರಪ್ರಸಾರ ಸ್ಪೋರ್ಟ್ಸ್ 18 ನೆಟ್ ವರ್ಕ್ ಮತ್ತು ಜಿಯೋ ಆಪ್ ನಲ್ಲಿ ಪ್ರಸಾರವಾಗುತ್ತಿದೆ. ಅಲ್ಲದೆ, ಮೈದಾನದಲ್ಲೂ ಸಾವಿರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ಉಪಸ್ಥಿತರಿದ್ದಾರೆ. ಈ ಮೂಲಕ ಮಹಿಳಾ ಕ್ರಿಕೆಟ್ ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೇ ಕ್ಷಣಗಳಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಈ ಪಂದ್ಯ ಅರ್ಧಗಂಟೆ ತಡವಾಗಿ ಅಂದರೆ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.