Publish Date: Tue, 02 Jun 2026 (11:43 IST)
Updated Date: Tue, 02 Jun 2026 (11:48 IST)
ಮುಂಬೈ: ಐಪಿಎಲ್ ಪಂದ್ಯಾವಳಿಯೇನೋ ಮುಗಿಯಿತು. ಇನ್ನೀಗ ಟೀಂ ಇಂಡಿಯಾ ಆಡಲಿರುವ ಕ್ರಿಕೆಟ್ ಸರಣಿಗಳತ್ತ ಅಭಿಮಾನಿಗಳು ಎದಿರು ನೋಡುತ್ತಿದ್ದಾರೆ. ಟೀಂ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ.
ಐಪಿಎಲ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಇದೀಗ ಅಫ್ಘಾನಿಸ್ತಾನದ ವಿರುದ್ಧ ಟೆಸ್ಟ್, ಏಕದಿನ ಸರಣಿ ಆಡಲಿದೆ. ಈ ಸರಣಿ ತವರಿನಲ್ಲಿ ನಡೆಯಲಿದ್ದು, ವಿರಾಟ್ ಕೊಹ್ಲಿ-ರೋಹಿತ್ ಶರ್ಮಾರಂತಹ ತಾರಾ ಆಟಗಾರರು ಕಣಕ್ಕಿಳಿಯುವುದನ್ನು ತವರಿನಲ್ಲೇ ವೀಕ್ಷಿಸಬಹುದಾಗಿದೆ.
ಮೊದಲು ಟೆಸ್ಟ್ ಸರಣಿ ನಡೆಯಲಿದೆ. ಜೂನ್ 6 ರಿಂದ 10 ರವರೆಗೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಶುಭಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್, ರಿಷಭ್ ಪಂತ್, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್, ದೇವದತ್ತ ಪಡಿಕ್ಕಲ್ ಮೊದಲಾದ ಹಿರಿಯರಿದ್ದಾರೆ. ಈ ಪಂದ್ಯ ತಿರಾದ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.
ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಇದು ಹಗಲು ರಾತ್ರಿಯಾಗಿ ನಡೆಯಲಿದ್ದು ಮೊದಲ ಪಂದ್ಯ ಜೂನ್ 13 ರಂದು ಧರ್ಮಶಾಲಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ತಾರಾ ಆಟಗಾರರಿದ್ದಾರೆ. ಎರಡನೇ ಪಂದ್ಯ ಜೂನ್ 17 ರಂದು ಏಕನಾ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯವೂ ಮಧ್ಯಾಹ್ನ 1.30 ಕ್ಕೆ ಆರಂಭವಾಗುವುದು. ಮೂರನೇ ಮತ್ತು ಅಂತಿಮ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ. ಏಕದಿನ ಸರಣಿಯ ಎಲ್ಲಾ ಪಂದ್ಯಗಳೂ 1.30 ಕ್ಕೆ ಆರಂಭವಾಗಲಿದೆ. ಇಲ್ಲಿದೆ ಅಫ್ಘಾನಿಸ್ತಾನ ವಿರುದ್ಧದ ಸರಣಿ ಮುಕ್ತಾಯವಾಗಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ