ಮುಂಬೈ: ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ ನೀಡಲಾಗಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಇದ್ದಾರೆ ಈ ವಿವರವಿದೆ.
ಇಂದು ಮುಂಬೈನಲ್ಲಿ ಸಭೆ ನಡೆಸಿದ ಆಯ್ಕೆ ಸಮಿತಿ ಏಷ್ಯಾ ಕಪ್ ಗೆ ಟೀಂ ಇಂಡಿಯಾ ಆಯ್ಕೆ ಮಾಡಿದೆ. ಸೂರ್ಯಕುಮಾರ್ ಯಾದವ್ ನಿರೀಕ್ಷೆಯಂತೇ ಗಾಯದಿಂದ ಚೇತರಿಸಿಕೊಂಡು ಕಮ್ ಬ್ಯಾಕ್ ಮಾಡಿದ್ದಾರೆ. ಅವರು ತಂಡವನ್ನು ಮುನ್ನಡೆಸಲಿದ್ದಾರೆ.
ವಿಶೇಷವೆಂದರೆ ಶುಭಮನ್ ಗಿಲ್ ಗೆ ಮತ್ತೆ ಅವಕಾಶ ಸಿಕ್ಕಿದೆ. ಅದೂ ಉಪನಾಯಕನಾಗಿ ಬಡ್ತಿ ಸಿಕ್ಕಿದೆ. ಆದರೆ ಈ ಹಿಂದೆ ಉಪನಾಯಕನಾಗಿದ್ದ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ ಸಿಕ್ಕಿದೆ. ಆದರೆ ಅವರು ತಂಡದಲ್ಲಿ ಮುಂದುವರಿಯಲಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ತಂಡದಲ್ಲಿರಲಿದ್ದಾರೆ.
ಸೆಪ್ಟೆಂಬರ್ 9 ರಿಂದ ಯುಎಇನಲ್ಲಿ ಏಷ್ಯಾಕಪ್ ಆರಂಭವಾಗಲಿದೆ. ಭಾರತ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಆಡಲಿದೆ. ಉಳಿದಂತೆ ಭಾರತ ತಂಡದಲ್ಲಿ ಯಾರೆಲ್ಲಾ ಇದ್ದಾರೆ ಇಲ್ಲಿದೆ ನೋಡಿ ಪಟ್ಟಿ.
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮ, ಹಾರ್ದಿಕ್ ಪಾಂಡ್ಯ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ಶಿವಂ ದುಬೆ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಅರ್ಷ್ ದೀಪ್ ಸಿಂಗ್.