Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ವಿರುದ್ಧ ಟಿ20, ಏಕದಿನಕ್ಕೆ ರೋಹಿತ್ ವಾಪಸ್: ಆದ್ರೂ ಅಭಿಮಾನಿಗಳು ಗರಂ

ಇಂಗ್ಲೆಂಡ್ ವಿರುದ್ಧ ಟಿ20, ಏಕದಿನಕ್ಕೆ ರೋಹಿತ್ ವಾಪಸ್: ಆದ್ರೂ ಅಭಿಮಾನಿಗಳು ಗರಂ
ಮುಂಬೈ , ಶುಕ್ರವಾರ, 1 ಜುಲೈ 2022 (10:50 IST)
ಮುಂಬೈ: ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ತಂಡಕ್ಕೆ ವಾಪಸ್ ಆಗುತ್ತಿದ್ದಾರೆ. ಹಿಟ್ ಮ್ಯಾನ್ ತಂಡಕ್ಕೆ ಮರಳುತ್ತಿರುವುದು ಅಭಿಮಾನಿಗಳಿಗೆ ಖುಷಿಯೇ. ಆದರೂ ಮತ್ತೊಂದು ವಿಚಾರ ಅಭಿಮಾನಿಗಳ ಕೋಪ ನೆತ್ತಿಗೇರಿಸಿದೆ.

ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಸರಣಿಗೆ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಿದ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ. ಆದರೆ ಎರಡನೇ ಮತ್ತು ಮೂರನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ರಿಷಬ್ ಪಂತ್ ಮುಂತಾದವರು ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಹೀಗಾಗಿ ಪ್ರತಿಭಾವಂತ ಸಂಜು ಸ್ಯಾಮ್ಸನ್ ಗೆ ಕೊಕ್ ನೀಡಲಾಗಿದೆ. ಏಕದಿನ ತಂಡದಲ್ಲೂ ಸಂಜು ಸ್ಯಾಮ್ಸನ್ ರನ್ನು ಕೈ ಬಿಡಲಾಗಿದೆ.

ಇದು ಕೆಲವು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡದ್ದಲ್ಲದೆ, ಐರ್ಲೆಂಡ್ ವಿರುದ್ಧವೂ ಉತ್ತಮ ಬ್ಯಾಟಿಂಗ್ ಮಾಡಿದ್ದ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡದ್ದರ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊದಲ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ‍್ ಖಾನ್, ಅರ್ಷ್ ದೀಪ್ ಸಿಂಗ್, ಉಮ್ರಾನ್ ಮಲಿಕ್.
ಎರಡು ಮತ್ತು ಮೂರನೇ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶ್ರಾದ್ಧೂಲ್ ಠಾಕೂರ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷ್ ದೀಪ್ ಸಿಂಗ್.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿಗೆ ನಾಯಕನಾಗುವ ಮೊದಲು ಧೋನಿ ಮಾತು ನೆನೆನಸಿಕೊಂಡ ಜಸ್ಪ್ರೀತ್ ಬುಮ್ರಾ