Publish Date: Tue, 25 Oct 2016 (09:08 IST)
Updated Date: Tue, 25 Oct 2016 (09:18 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಉಳಿದೆರಡು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.
ಹಿರಿಯ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಆಯ್ಕೆಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಜ್ವರದ ಕಾರಣದಿಂದ ತಂಡಕ್ಕೆ ಆಯ್ಕೆಯಾಗಿದ್ದರೂ ಆಡದೇ ಇದ್ದ ಸುರೇಶ್ ರೈನಾ ಅವರನ್ನು ಕೈ ಬಿಡಲಾಗಿದೆ. ಆದರೆ ರೈನಾ ಬದಲಿಗೆ ಬೇರೆ ಯಾವುದೇ ಆಟಗಾರನನ್ನು ಆಯ್ಕೆ ಮಾಡಿಲ್ಲ.
ಹಿರಿಯ ಆಟಗಾರರಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ಅವರಿಗೆ ನೀಡಲಾಗಿದ್ದ ವಿಶ್ರಾಂತಿ ಮುಂದುವರಿಸಲಾಗಿದೆ. ಮುಂಬರುವ ದಿನಗಳಲ್ಲಿ ಭಾರತ ಬಿಡುವಿಲ್ಲದೆ ಟೆಸ್ಟ್ ಸರಣಿ ಆಡಬೇಕಾಗಿರುವುದರಿಂದ ಈ ಮೂವರು ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ