ಮುಂಬೈ: ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, 18 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕರಾಗಿದ್ದು, ರೋಹಿತ್ ಶರ್ಮಾಗೆ ಉಪನಾಯಕತ್ವದ ಹೊಣೆ ನೀಡಲಾಗಿದೆ. ಕಳಪೆ ಫಾರ್ಮ್ ಹೊರತಾಗಿಯೂ ಅಜಿಂಕ್ಯಾ ರೆಹಾನೆ ತಂಡದಲ್ಲಿ ಸ್ಥಾನ ಪಡೆಯಲು ಸಫಲರಾಗಿದ್ದಾರೆ. ಆದರೆ ಗಾಯಗೊಂಡ ರವೀಂದ್ರ ಜಡೇಜಾ, ಶುಬ್ನಂ ಗಿಲ್, ಅಕ್ಸರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಸಂಪೂರ್ಣ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ಶ್ರೇಯಸ್ ಐಯರ್, ಹನುಮ ವಿಹಾರಿ, ರಿಷಬ್ ಪಂತ್, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶ್ರಾದ್ಧೂಲ್ ಠಾಕೂರ್ ಮತ್ತು ಮೊಹಮ್ಮದ್ ಸಿರಾಜ್.