Publish Date: Tue, 21 Nov 2023 (08:30 IST)
Updated Date: Tue, 21 Nov 2023 (09:03 IST)
ಮುಂಬೈ: ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಈಗ ಟಿ20 ಸರಣಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ ತಂಡ ಪ್ರಕಟಿಸಿದೆ.
ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಗೆ ವಿಶ್ರಾಂತಿ ನೀಡಲಾಗಿದೆ.
ಇವರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಕೊನೆಯ ಎರಡು ಪಂದ್ಯಗಳಿಗೆ ಉಪನಾಯಕರಾಗಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದಕ್ಕೆ ಮೊದಲು ಋತುರಾಜ್ ಗಾಯಕ್ ವಾಡ್ ತಂಡದ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಇದೀಗ ಪ್ರಕಟವಾಗಿರುವ ತಂಡ ಇಂತಿದೆ: ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ರಿಂಕು ಸಿಂಗ್, ಜಿತೇಶ್ ಶರ್ಮ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷ್ ದೀಪ್ ಸಿಂಗ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್, ಮುಕೇಶ್ ಕುಮಾರ್.