Select Your Language

Notifications

webdunia
webdunia
webdunia
webdunia

ವಿಂಡೀಸ್ ಸರಣಿಗೆ ಹಳೇ ಆಟಗಾರರ ಹೊಸ ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ

ವಿಂಡೀಸ್ ಸರಣಿಗೆ ಹಳೇ ಆಟಗಾರರ ಹೊಸ ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ
ಮುಂಬೈ , ಸೋಮವಾರ, 22 ಜುಲೈ 2019 (09:12 IST)
ಮುಂಬೈ: ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟಿಸಲಾಗಿದ್ದು, ಇದನ್ನು ಒಂದು ರೀತಿಯಲ್ಲಿ ಹಳೇ ಬಾಟಲಿಯಲ್ಲಿ ಹೊಸ ಔಷಧ ಎನ್ನಬಹುದು.


ವಿಶ್ವಕಪ್ ಸೋಲಿನ ಬಳಿಕ ನಿರೀಕ್ಷೆಯಂತೇ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಕನ್ನಡಿಗ ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ಖಲೀಲ್ ಅಹಮ್ಮದ್ ಮತ್ತು ನವದೀಪ್ ಶೈನಿಗೆ ಮತ್ತೆ ಅವಕಾಶ ನೀಡಲಾಗಿದೆ. ಅಚ್ಚರಿಯೆಂಬಂತೆ ಹಾರ್ದಿಕ್ ಪಾಂಡ್ಯಗೆ ಏಕದಿನ ಮತ್ತು ಟಿ20 ತಂಡದಿಂದ ಕೊಕ್ ನೀಡಲಾಗಿದೆ.  ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್, ಏಕದಿನ, ಟಿ20 ಮೂರೂ ತಂಡಗಳಲ್ಲಿ ಸ್ಥಾನ ನೀಡಿದ್ದಾರೆ. ಮಯಾಂಕ್ ಅಗರ್ವಾಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮೂರೂ ತಂಡಗಳು ಇಂತಿವೆ.

ಟೆಸ್ಟ್ ತಂಡ: ಕೆಎಲ್ ರಾಹುಲ್,  ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಬ್ ಪಂತ್, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ,  ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಉಮೇಶ್ ಯಾದವ್.

ಏಕದಿನ: ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶಿಖರ್ ಧವನ್, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಕುಲದೀಪ್ ಯಾದವ್,  ಯಜುವೇಂದ್ರ ಚಾಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ ಮತ್ತು ಖಲೀಲ್ ಅಹಮ್ಮದ್.

ಟಿ20: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ,  ಶಿಖರ್ ಧವನ್, ಕೆಎಲ್ ರಾಹುಲ್, ‍ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಮನೀಶ್ ಪಾಂಡೆ, ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹಮ್ಮದ್, ದೀಪಕ್ ಚಹರ್, ನವದೀಪ್ ಸೈನಿ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ನಿವೃತ್ತಿ ಬಗ್ಗೆ ಕೇಳಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಕೊಟ್ಟ ಖಡಕ್ ಉತ್ತರ