ಮುಂಬೈ: ಜೂನ್ ನಲ್ಲಿ ಇಂಗ್ಲೆಂಡ್ ನ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಜೂನ್ 7 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನಿರೀಕ್ಷೆಯಂತೇ ಗಾಯಗೊಂಡಿರುವ ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ. ಆದರೆ ಬಹಳ ದಿನಗಳ ನಂತರ ಅಜಿಂಕ್ಯಾ ರೆಹಾನೆ ಟೆಸ್ಟ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಉಳಿದಂತೆ ತಂಡ ಇಲ್ಲಿದೆ.
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶ್ರಾದ್ಧೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ,ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.