Publish Date: Sun, 04 Nov 2018 (09:33 IST)
Updated Date: Sun, 04 Nov 2018 (09:35 IST)
ಕೋಲ್ಕೊತ್ತಾ: ಭಾರತದ ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ ನಲ್ಲಿ ಇಂದು ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಅಂತಿಮ 12 ಮಂದಿ ಆಟಗಾರರನ್ನು ಘೋಷಣೆ ಮಾಡಿದೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಈ ಸರಣಿಗೆ ಧೋನಿ ಕೂಡಾ ಆಯ್ಕೆಯಾಗಿಲ್ಲ. ಹೀಗಾಗಿ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಆಡುವುದು ಖಚಿತ.
ಅಂತಿಮ 12 ಆಟಗಾರರ ಪಟ್ಟಿ ಇಂತಿದೆ. ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕೃನಾಲ್ ಪಾಂಡ್ಯ,ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಯಜುವೇಂದ್ರ ಚಾಹಲ್.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.