Publish Date: Wed, 02 Jan 2019 (10:48 IST)
Updated Date: Wed, 02 Jan 2019 (10:49 IST)
ಸಿಡ್ನಿ: ನಾಳೆಯಿಂದ ಸಿಡ್ನಿಯಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ 13 ಸದಸ್ಯರ ತಂಡ ಪ್ರಕಟಿಸಿದ್ದು, ಕೆಎಲ್ ರಾಹುಲ್, ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಮ್ ಬ್ಯಾಕ್ ಮಾಡಿದ್ದಾರೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಳಪೆ ಫಾರ್ಮ್ ನಲ್ಲಿದ್ದರೂ ಕೆಎಲ್ ರಾಹುಲ್ ಗೆ ಅವಕಾಶ ಸಿಕ್ಕಿದೆ. ಅತ್ತ ಅಶ್ವಿನ್ ಇನ್ನೂ ಪೂರ್ಣ ಪ್ರಮಾಣದಲ್ಲಿ ಫಿಟ್ ಆಗಿಲ್ಲದಿದ್ದರೂ ಅಂತಿಮ 13 ರಲ್ಲಿ ಸ್ಥಾನ ಪಡೆದಿದ್ದಾರೆ.
ತಂಡ ಇಂತಿದೆ: ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್, ಕೆ ಜಾದವ್, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಆರ್ ಜಡೇಜಾ, ಜಸ್ಪ್ರೀತ್ ಬುಮ್ರಾ ಮತ್ತು ಉಮೇಶ್ ಯಾದವ್.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ