ಮುಂಬೈ: ಬಹಳ ದಿನಗಳ ನಂತರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಣಕ್ಕಿಳಿಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ವೇಳಾಪಟ್ಟಿ ಮತ್ತು ಲೈವ್ ಎಲ್ಲಿ ವೀಕ್ಷಿಸಬೇಕು ಇತ್ಯಾದಿ ವಿವರ ಇಲ್ಲಿದೆ ನೋಡಿ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾರತದ ಪರ ಮೈದಾನಕ್ಕಿಳಿದಿಲ್ಲ. ಟೆಸ್ಟ್ ಮತ್ತು ಟಿ20 ಕ್ರಿಕೆಟ್ ನಿಂದ ನಿವೃತ್ತಿ ಪಡೆದಿರುವ ಈ ಇಬ್ಬರು ದಿಗ್ಗಜರ ಆಟವನ್ನು ಅಭಿಮಾನಿಗಳು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ಆದರೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಬ್ಬರೂ ಆಡುತ್ತಿದ್ದಾರೆ. ಈ ಸರಣಿಗೆ ಶುಭಮನ್ ಗಿಲ್ ನಾಯಕರಾಗಿದ್ದು ರೋಹಿತ್ ಸಾಮಾನ್ಯ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ.
ಸರಣಿಯ ಮೊದಲ ಪಂದ್ಯ ಅಕ್ಟೋಬರ್ 19 ರಂದು ಪರ್ತ್ ನ ಆಪ್ಟಸ್ ಮೈದಾನದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಅಕ್ಟೋಬರ್ 23 ರಂದು ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ. ಮೂರನೇ ಮತ್ತು ಅಂತಿಮ ಪಂದ್ಯ ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 9 ಗಂಟೆಗೆ ಆರಂಭವಾಗುವುದು. ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಮತ್ತು ಜಿಯೋ ಹಾಟ್ ಸ್ಟಾರ್ ನಲ್ಲಿ ಪಂದ್ಯಗಳ ನೇರಪ್ರಸಾರ ವೀಕ್ಷಿಸಬಹುದಾಗಿದೆ.