Publish Date: Mon, 10 Jul 2023 (09:10 IST)
Updated Date: Mon, 10 Jul 2023 (09:11 IST)
ವಿಂಡ್ಸರ್ ಪಾರ್ಕ್: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಕೆರೆಬಿಯನ್ ನಾಡಿನಲ್ಲಿರುವ ಟೀಂ ಇಂಡಿಯಾ ಆಟಗಾರರು ಕಠಿಣ ಅಭ್ಯಾಸ ನಡೆಸಿದ್ದಾರೆ.
ಟೀಂ ಇಂಡಿಯಾ ಆಟಗಾರರು ನೆಟ್ಸ್ ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ಕ್ಷಣಗಳನ್ನು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಅಜಿಂಕ್ಯಾ ರೆಹಾನ್, ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್ ಸೇರಿದಂತೆ ಟೀಂ ಇಂಡಿಯಾ ಆಟಗಾರರು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ. ಜುಲೈ 12 ರಿಂದ ಮೊದಲ ಟೆಸ್ಟ್ ಆರಂಭವಾಗಲಿದೆ.