Publish Date: Sun, 27 Dec 2020 (09:26 IST)
Updated Date: Sun, 27 Dec 2020 (09:27 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ.
ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 195 ರನ್ ಗಳಿಸಿತ್ತು. ಇದೀಗ ಭಾರತಕ್ಕೆ ಮೊದಲ ಇನಿಂಗ್ಸ್ ಮೊತ್ತ ದಾಟಲು 22 ರನ್ ಗಳು ಸಾಕು. ಸದ್ಯಕ್ಕೆ ಕ್ರೀಸ್ ನಲ್ಲಿ 49 ರನ್ ಗಳಿಸಿರುವ ನಾಯಕ ಅಜಿಂಕ್ಯಾ ರೆಹಾನೆ ಮತ್ತು ಇನ್ನೂ ಖಾತೆ ತೆರೆಯದೇ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಿನ್ನೆಯ ದಿನದಾಟದಲ್ಲಿ ಭಾರತ 1 ವಿಕೆಟ್ ನಷ್ಟಕ್ಕೆ 36 ರನ್ ಗಳಿಸಿತ್ತು. ಇಂದು ಶಬ್ನಂ ಗಿಲ್ 45 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ 17, ಹನುಮ ವಿಹಾರಿ 21, ರಿಷಬ್ ಪಂತ್ 29 ರನ್ ಗಳಿಸಿ ಔಟಾದರು.