ಬೆಂಗಳೂರು: ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯಕ್ಕಾಗಿ ಬೆಂಗಳೂರಿನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ನಿನ್ನೆ ದೀಪಾವಳಿ ಹಬ್ಬ ಆಚರಿಸಿಕೊಂಡಿದ್ದಾರೆ.
ರೋಹಿತ್ ಶರ್ಮಾ ಸೇರಿದಂತೆ ಇಡೀ ಭಾರತೀಯ ತಂಡ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ್ದು, ತಾವು ಉಳಿದುಕೊಂಡಿರುವ ಹೋಟೆಲ್ ನಲ್ಲಿಯೇ ದೀಪಾವಳಿ ಹಬ್ಬ ಆಚರಿಸಿಕೊಂಡಿದ್ದಾರೆ.
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶುಬ್ಮನ್ ಗಿಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸೇರಿದಂತೆ ಎಲ್ಲಾ ಕ್ರಿಕೆಟಿಗರು ದೀಪಾವಳಿ ಸಂಭ್ರಮವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಶುಭ ಕೋರಿದ್ದಾರೆ.