Publish Date: Tue, 09 Nov 2021 (07:52 IST)
Updated Date: Tue, 09 Nov 2021 (09:01 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಕೊನೆಯ ಲೀಗ್ ಪಂದ್ಯದಲ್ಲಿ ಗೆಲುವು ಕಾಣುವುದರೊಂದಿಗೆ ಟೀಂ ಇಂಡಿಯಾ ಈ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿದೆ.
ಸೆಮಿಫೈನಲ್ ಹಂತಕ್ಕೇರಲು ವಿಫಲವಾಗಿರುವ ಟೀಂ ಇಂಡಿಯಾ ನಿನ್ನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು 9 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ನಮೀಬಿಯಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಈ ಮೊತ್ತವನ್ನು ಟೀಂ ಇಂಡಿಯಾ 15.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿ ಗೆಲುವಿನ ಗುರಿ ತಲುಪಿತು. ಭಾರತದ ಪರ ಕೆಎಲ್ ರಾಹುಲ್ ಅಜೇಯ 54, ರೋಹಿತ್ ಶರ್ಮಾ 56 ಮತ್ತು ಸೂರ್ಯಕುಮಾರ್ ಯಾದವ್ ಔಟಾಗದೇ 25 ರನ್ ಗಳಿಸಿದರು. ಬೌಲಿಂಗ್ ನಲ್ಲಿ ಶ್ರೇಷ್ಠ ಪ್ರದರ್ಶನವಿತ್ತು ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠರಾದರು.