ದುಬೈ: ಟಿ20 ವಿಶ್ವಕಪ್ ನಲ್ಲಿ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಟೀಂ ಇಂಡಿಯಾ ಭರ್ಜರಿ ಅಭ್ಯಾಸ ನಡೆಸುತ್ತಿದೆ.
ನಿನ್ನೆಯ ದಿನ ಟೀಂ ಇಂಡಿಯಾ ಕ್ರಿಕೆಟಿಗರು ಫೀಲ್ಡಿಂಗ್ ಅಭ್ಯಾಸ ಮಾಡಿದ್ದಾರೆ. ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ ಸೇರಿದಂತೆ ಭಾರತೀಯ ತಂಡ ಕ್ಯಾಚಿಂಗ್ ಅಭ್ಯಾಸ ನಡೆಸಿದೆ.
ಭಾನುವಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯ ಗೆದ್ದರೆ ಮಾತ್ರ ಭಾರತಕ್ಕೆ ಮುಂದಿನ ಹಾದಿ ಸುಗಮವಾಗಲಿದೆ. ಒಂದು ವೇಳೆ ಸೋತರೆ ಮುಂದಿನ ಹಾದಿ ಕಷ್ಟವಾಗಲಿದೆ. ಹೀಗಾಗಿ ಈ ಪಂದ್ಯವನ್ನು ಟೀಂ ಇಂಡಿಯಾ ಗಂಭೀರವಾಗಿ ಪರಿಗಣಿಸಿದೆ.