Select Your Language

Notifications

webdunia
webdunia
webdunia
webdunia

ನ್ಯೂಜಿಲೆಂಡ್ ಸರಣಿಗೆ ತೆರಳಿದ ಟೀಂ ಇಂಡಿಯಾ

ನ್ಯೂಜಿಲೆಂಡ್ ಸರಣಿಗೆ ತೆರಳಿದ ಟೀಂ ಇಂಡಿಯಾ
ಮುಂಬೈ , ಮಂಗಳವಾರ, 21 ಜನವರಿ 2020 (09:43 IST)
ಮುಂಬೈ: ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳ ಸುದೀರ್ಘ ಸರಣಿಗೆ ಟೀಂ ಇಂಡಿಯಾ ಕ್ರಿಕೆಟಿಗರು ಕೀವೀಸ್ ನಾಡಿಗೆ ಪ್ರಯಾಣ ಬೆಳೆಸಿದ್ದಾರೆ.


ಶುಕ್ರವಾರದಿಂದ ಟಿ20 ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾ ಮೊದಲಿಗೆ ಒಟ್ಟು ಐದು ಟಿ20 ಪಂದ್ಯಗಳನ್ನು ಆಡಲಿದೆ. ಬಳಿಕ ಮೂರು ಏಕದಿನ ಪಂದ್ಯಗಳ ಸರಣಿ ಹಾಗೂ ಬಳಿಕ ಎರಡು ಟೆಸ್ಟ್ ಪಂದ್ಯಗಳನ್ನಾಡಲಿದೆ. ಫೆಬ್ರವರಿ ಅಂತ್ಯದವರೆಗೂ ಸರಣಿ ನಡೆಯಲಿದೆ.

ನ್ಯೂಜಿಲೆಂಡ್ ಪ್ರವಾಸ ಭಾರತಕ್ಕೆ ಯಾವತ್ತೂ ಕಠಿಣ ಸವಾಲಿನಿಂದ ಕೂಡಿರುತ್ತದೆ. ಇಲ್ಲಿ ರನ್ ಗಳಿಸುವುದು ಅಷ್ಟು ಸುಲಭವಲ್ಲ. ಜತೆಗೆ ಹವಾಗುಣಕ್ಕೆ ಒಗ್ಗಿಕೊಳ್ಳುವುದೂ ಕಷ್ಟವಾಗುತ್ತದೆ. ಹೀಗಾಗಿ ಭಾರತಕ್ಕೆ ಇದೊಂದು ಕಠಿಣ ಸವಾಲಾಗಲಿದೆ. ಆದರೆ ಈ ಸರಣಿಯಲ್ಲಿ ಮೊದಲ ಬಾಲ್ ನಿಂದಲೇ ಎದುರಾಳಿಗಳ ಮೇಲೆ ಒತ್ತಡ ಹೇರುವುದಾಗಿ ನಾಯಕ ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಸಿಸಿ ಏಕದಿನ ಶ್ರೇಯಾಂಕ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದರ್ಬಾರು