Select Your Language

Notifications

webdunia
webdunia
webdunia
webdunia

ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿಗೆ ಇಂದು ಟೀಂ ಇಂಡಿಯಾ ಘೋಷಣೆ ಸಾಧ್ಯತೆ

Team India

Krishnaveni K

ಮುಂಬೈ , ಭಾನುವಾರ, 7 ಜನವರಿ 2024 (12:00 IST)
ಮುಂಬೈ: ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಇಂದು ಟೀಂ ಇಂಡಿಯಾ ಪ್ರಕಟವಾಗುವ ಸಾಧ‍್ಯತೆಯಿದೆ.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಇಂದು ಸಭೆ ಸೇರುವ ಸಾಧ‍್ಯತೆಯಿದ್ದು, ಸಂಜೆ ವೇಳೆಗೆ ತಂಡ ಪ್ರಕಟವಾಗುವ ಸಾಧ‍್ಯತೆಯಿದೆ. ಈ ಮೂಲಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಭವಿಷ್ಯ ಕೂಡಾ ನಿರ್ಧಾರವಾಗಲಿದೆ.

ಒಂದು ವೇಳೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರನ್ನು ಕಡೆಗಣಿಸಿದರೆ ಕೆಎಲ್ ರಾಹುಲ್ ಗೆ ನಾಯಕತ್ವ ಸಿಗುವ ಸಾಧ‍್ಯತೆಯಿದೆ. ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಗಾಯಗೊಂಡಿರುವುದರಿಂದ ಈ ಆಟಗಾರರು ಅಲಭ್ಯರಾಗಲಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರಿಗೆ ಮಣೆ ಹಾಕುವ ಸಾಧ‍್ಯತೆ ಹೆಚ್ಚು. ರೋಹಿತ್, ಕೊಹ್ಲಿ ಇಂದು ಆಯ್ಕೆಯಾಗದೇ ಇದ್ದರೆ ಅವರ ಟಿ20 ವಿಶ್ವಕಪ್ ಭವಿಷ್ಯವೂ ಮುಸುಕಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ಹುಕ್ಕಾ ಸೇದುವ ವಿಡಿಯೋ ವೈರಲ್