ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಪ್ರಮುಖ ಬ್ಯಾಟಿಗರಾದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ತಂಡಕ್ಕೆ ವಾಪಸ್ ಆಗಿದ್ದಾರೆ.
ಆದರೆ ಬೆನ್ನು ನೋವಿಗೊಳಗಾಗಿರುವ ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರ ನಡೆದಿದ್ದಾರೆ. ಹೀಗಾಗಿ ವೇಗದ ಬೌಲರ್ ಗಳಾಗಿ ಆವೇಶ್ ಖಾನ್, ಅರ್ಷ್ ದೀಪ್ ಸಿಂಗ್ ಮುಂತಾದ ಯುವ ವೇಗಿಗಳನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿಯೆಂದರೆ ಮೊಹಮ್ಮದ್ ಶಮಿಯಂತಹ ಅನುಭವಿಯನ್ನು ಹೊರಗಿಡಲಾಗಿದೆ. ಹೀಗಾಗಿ ಬುಮ್ರಾ ಇಲ್ಲದ ವೇಗದ ಬೌಲಿಂಗ್ ವಿಭಾಗ ದುರ್ಬಲವಾಗಿ ಕಾಣುತ್ತಿದೆ. ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್ ಬೈ ಆಟಗಾರರಾಗಿ ಆಯ್ಕೆ ಮಾಡಲಾಗಿದೆ.
ಉಳಿದಂತೆ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಜಡೇಜಾ, ರವಿಚಂದ್ರನ್ ಅಶ್ವಿನ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ‍್ವರ್ ಕುಮಾರ್, ಅರ್ಷ್ ದೀಪ್ ಸಿಂಗ್, ಆವೇಶ್ ಖಾನ್.