Publish Date: Mon, 08 Aug 2022 (10:24 IST)
Updated Date: Mon, 08 Aug 2022 (10:26 IST)
ಮುಂಬೈ: ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ಇಂದು ನಡೆಯಲಿದೆ.
ಯುಎಇನಲ್ಲಿ ಆಗಸ್ಟ್ 27 ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಏಷ್ಯಾದ ಆರು ತಂಡಗಳು ಭಾಗಿಯಾಗಲಿವೆ.
ಟಿ20 ಫಾರ್ಮ್ಯಾಟ್ ನಲ್ಲಿ ಟೂರ್ನಿ ನಡೆಯಲಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾವನ್ನು ಇಂದು ಪ್ರಕಟಿಸಲಾಗುತ್ತಿದೆ. ಗಾಯಗೊಂಡು ಹೊರಗುಳಿದಿರುವ ಕೆಎಲ್ ರಾಹುಲ್ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಯಿದ್ದು, ಸದ್ಯಕ್ಕೆ ವಿಶ್ರಾಂತಿ ಪಡೆದಿರುವ ಹಿರಿಯ ಬ್ಯಾಟಿಗ ವಿರಾಟ್ ಕೊಹ್ಲಿ ಕೂಡಾ ವಾಪಸಾಗುವ ಸಾಧ್ಯತೆಯಿದೆ. ಉಳಿದಂತೆ ಯಾವೆಲ್ಲಾ ಆಟಗಾರರು ಸ್ಥಾನ ಪಡೆಯಬಹುದು ಎಂಬ ಕುತೂಹಲವಿದೆ.