ಮುಂಬೈ: ಭಾರತ ಮತ್ತು ಬಾಂಗ್ಲಾದೇಶನ ನಡುವೆ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟವಾಗಿದ್ದು ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದುಕೊಂಡರೆ ಶ್ರೇಯಸ್ ಅಯ್ಯರ್ ಗೆ ಅದೃಷ್ಟ ಸಿಕ್ಕಿಲ್ಲ.
ದುಲೀಪ್ ಟ್ರೋಫಿ ಪಂದ್ಯ ಮುಗಿದ ಬೆನ್ನಲ್ಲೇ ಬಾಂಗ್ಲಾದೇಶ ಸರಣಿಗೆ ತಂಡ ಪ್ರಕಟವಾಗಲಿದೆ ಎನ್ನಲಾಗಿತ್ತು. ಅದರಂತೆ ನಿನ್ನೆ ದುಲೀಪ್ ಟ್ರೋಫಿ ಮುಗಿದ ಬೆನ್ನಲ್ಲೇ ತಂಡ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಟ್ಟು 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ.
ದುಲೀಪ್ ಟ್ರೋಫಿ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸರ್ಫರಾಜ್ ಖಾನ್ ಗೆ ಅವಕಾಶ ನೀಡಲಾಗಿದೆ. ಆದರೆ ಶ್ರೇಯಸ್ ಅಯ್ಯರ್ ಮತ್ತೆ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಆದರೆ ಕೆಎಲ್ ರಾಹುಲ್ ಎರಡೂ ಇನಿಂಗ್ಸ್ ಗಳಲ್ಲಿ ತಾಳ್ಮೆಯ ಆಟವಾಡಿದ್ದು ಅವರಿಗೆ ಅವಕಾಶ ನೀಡಲಾಗಿದೆ.
ಉಳಿದಂತೆ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜ್ಯುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.