ಮುಂಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ರೋಹಿತ್ ಶರ್ಮಾ ನೇತೃತ್ವದ 15 ಸದಸ್ಯರ ತಂಡದ ಫುಲ್ ಲಿಸ್ಟ್ ಇಲ್ಲಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಟೀಂ ಇಂಡಿಯಾ ಪ್ರಕಟಿಸಿದರು. ಈ ವೇಳೆ ನಾಯಕ ರೋಹಿತ್ ಶರ್ಮಾ ಕೂಡಾ ಉಪಸ್ಥಿತರಿದ್ದರು. ನಿರೀಕ್ಷೆಯಂತೇ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿದಿದ್ದು ಅಚ್ಚರಿಯೆಂಬಂತೆ ಶುಬ್ಮನ್ ಗಿಲ್ ಗೆ ಉಪನಾಯಕತ್ವ ನೀಡಲಾಗಿದೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಕರುಣ್ ನಾಯರ್ ಗೆ ಅವಕಾಶ ನೀಡಲಾಗಿಲ್ಲ. ಸಂಜು ಸ್ಯಾಮ್ಸನ್ ರನ್ನೂ ಕಡೆಗಣಿಸಲಾಗಿದ್ದು, ಕೆಎಲ್ ರಾಹುಲ್ ಮತ್ತು ರಿಷಭ್ ಪಂತ್ ವಿಕೆಟ್ ಕೀಪರ್ ಗಳಾಗಿದ್ದಾರೆ. ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಮೊಹಮ್ಮದ್ ಶಮಿ ಕಮ್ ಬ್ಯಾಕ್ ಮಾಡಿದ್ದಾರೆ. ಸ್ಪಿನ್ನರ್ ಗಳಾಗಿ ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಅಕ್ಸರ್ ಪಟೇಲ್ ತಂಡದಲ್ಲಿದ್ದಾರೆ. ಚಹಲ್ ಗೆ ಅವಕಾಶ ಸಿಕ್ಕಿಲ್ಲ.
ಉಳಿದಂತೆ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್ ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಸರ್ ಪಟೇಲ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ ಜ್ಯುರೆಲ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷ್ ದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್.