Publish Date: Tue, 05 Sep 2023 (16:23 IST)
Updated Date: Tue, 05 Sep 2023 (16:24 IST)
ಮುಂಬೈ: ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಗೆ 15 ಸದಸ್ಯರ ಟೀಂ ಇಂಡಿಯಾ ಪ್ರಕಟವಾಗಿದೆ.
ನಿರೀಕ್ಷೆಯಂತೇ ಸಂಜು ಸ್ಯಾಮ್ಸನ್, ತಿಲಕ್ ವರ್ಮ, ಅರ್ಷ್ ದೀಪ್ ಸಿಂಗ್ ಮುಂತಾದ ಕ್ರಿಕೆಟಿಗರಿಗೆ ಕೊಕ್ ನೀಡಲಾಗಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನು ಕಡೆಗಣಿಸಲಾಗಿದ್ದು, ಅಕ್ಸರ್ ಪಟೇಲ್ ಗೆ ಅವಕಾಶ ನೀಡಲಾಗಿದೆ. ಯಜುವೇಂದ್ರ ಚಾಹಲ್ ಕೂಡಾ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ರೋಹಿತ್ ಶರ್ಮಾ ನೇತೃತ್ವದ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.