Publish Date: Mon, 13 Jan 2020 (09:23 IST)
Updated Date: Mon, 13 Jan 2020 (09:24 IST)
ಮುಂಬೈ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು, ಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ರನ್ನು ಕೈ ಬಿಟ್ಟಿದ್ದಕ್ಕೆ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ 15 ಸದಸ್ಯರ ತಂಡ ಪ್ರಕಟಿಸಲಾಗಿದ್ದು, ಸಂಜು ಸ್ಯಾಮ್ಸನ್ ರನ್ನು ಕೈ ಬಿಟ್ಟು ರಿಷಬ್ ಪಂತ್ ಗೇ ಮಣೆ ಹಾಕಲಾಗಿದೆ. ಕೇವಲ ಒಂದೇ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ರನ್ನು ಪರಿಗಣಿಸಿ ಅಷ್ಟರಲ್ಲೇ ಅವರ ಪ್ರದರ್ಶನ ಅಳೆದು ತಂಡದಿಂದ ಕೈ ಬಿಟ್ಟಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದರೆ ರಿಷಬ್ ಪಂತ್ ಗೆ ಮಾತ್ರ ಒಂದು ವರ್ಷದಿಂದ ಪದೇ ಪದೇ ವಿಫಲರಾಗುತ್ತಿದ್ದರೂ ಮತ್ತೆ ಮತ್ತೆ ಅವಕಾಶ ನೀಡುತ್ತಿರುವುದೇಕೆ ಎಂದು ಅಭಿಮಾನಿಗಳು ಗರಂ ಆಗಿದ್ದಾರೆ.
ಭಾರತ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್, ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ ಮತ್ತು ಶ್ರಾದ್ಧೂಲ್ ಠಾಕೂರ್.