Publish Date: Sat, 24 Feb 2018 (21:09 IST)
Updated Date: Sat, 24 Feb 2018 (21:13 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ನಿರ್ಣಾಯಕ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲಿದೆ. ಆದರೆ ಇದಕ್ಕಿಂತ ಶಾಕ್ ಎಂದರೆ ಈ ಪಂದ್ಯದಲ್ಲಿ ನಾಯಕ ಕೊಹ್ಲಿ ಆಡುತ್ತಿಲ್ಲ.
ವಿರಾಟ್ ಗಾಯಗೊಂಡಿರುವುದರಿಂದ ಹೊರಗುಳಿದಿದ್ದಾರೆ. ಕೊಹ್ಲಿ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದು ಭಾರತ ತಂಡಕ್ಕೆ ನಿಜಕ್ಕೂ ಬಿಗ್ ಶಾಕ್. ವಿರಾಟ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ತಂಡಕ್ಕೆ ಬಂದಿದ್ದಾರೆ.
ಮೂರು ಪಂದ್ಯಗಳ ಸರಣಿಯಲ್ಲಿ ಎರಡೂ ತಂಡಗಳೂ ತಲಾ ಒಂದೊಂದು ಪಂದ್ಯ ಗೆದ್ದುಕೊಂಡಿರುವುದರಿಂದ ಈ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ