Publish Date: Mon, 02 Jul 2018 (09:14 IST)
Updated Date: Mon, 02 Jul 2018 (09:15 IST)
ಲಂಡನ್: ಇಂಗ್ಲೆಂಡ್ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ವಾಷಿಂಗ್ಟನ್ ಸುಂದರ್ ರೂಪದಲ್ಲಿ ಶಾಕ್ ಸಿಕ್ಕಿದೆ.
ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಬೆರಳಿಗೆ ಗಾಯ ಮಾಡಿಕೊಂಡಿದ್ದು, ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಅಂತಿಮ ಓವರ್ ಗಳಲ್ಲಿ ಎದುರಾಳಿಗಳನ್ನು ಕಟ್ಟಿ ಹಾಕಲು ನಿಸ್ಸೀಮನಾಗಿರುವ ಬುಮ್ರಾ ಅಲಭ್ಯತೆ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ನೀಡಲಿದೆ.
ಇನ್ನು, ಯುವ ಬೌಲರ್ ವಾಷಿಂಗ್ಟನ್ ಸುಂದರ್ ಐರ್ಲೆಂಡ್ ವಿರುದ್ಧ ಒಂದೇ ಒಂದು ಪಂದ್ಯವಾಡದಿದ್ದರೂ ಕಾಲು ಉಳುಕು ಮಾಡಿಕೊಂಡಿದ್ದು, ಇಂಗ್ಲೆಂಡ್ ವಿರುದ್ಧ ಟಿ20 ಆಡುವ ಅವಕಾಶ ಕಳೆದುಕೊಂಡಿದ್ದಾರೆ.
ಬುಮ್ರಾ ಮತ್ತು ಸುಂದರ್ ಬದಲಿಗೆ ದೀಪಕ್ ಚಹರ್ ಮತ್ತು ಹಾರ್ದಿಕ್ ಪಾಂಡ್ಯ ಸಹೋದರ ಕೃಣಾಲ್ ಪಾಂಡ್ಯಗೆ ಬುಲಾವ್ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.