Publish Date: Wed, 10 Feb 2021 (09:46 IST)
Updated Date: Wed, 10 Feb 2021 (09:48 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯ ಸೋತಿದ್ದರಿಂದ ಕೇವಲ ಈ ಸರಣಿಗೆ ಮಾತ್ರವಲ್ಲ, ಭಾರತದ ಟೆಸ್ಟ್ ಚಾಂಪಿಯನ್ ಶಿಪ್ ಹಾದಿಯೂ ದುರ್ಗಮವಾಗಿದೆ.
ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಭಾರತ ಈಗ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇದರಿಂದಾಗಿ ಲಾರ್ಡ್ಸ್ ನಲ್ಲಿ ನಡೆಯಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆಯಬೇಕಾದರೆ ಭಾರತ ಇನ್ನು ಉಳಿದ ಮೂರು ಪಂದ್ಯಗಳ ಪೈಕಿ ಕನಿಷ್ಠ ಎರಡು ಪಂದ್ಯಗಳನ್ನಾದರೂ ಗೆಲ್ಲೇಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ.