Publish Date: Sun, 08 Aug 2021 (09:07 IST)
Updated Date: Sun, 08 Aug 2021 (09:08 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನಂಚಿಗೆ ತಲುಪಿದೆ.
209 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ಟೀಂ ಇಂಡಿಯಾ ನಿನ್ನೆಯ ದಿನದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿದೆ. ಇನ್ನೂ ಗೆಲುವಿನ ಗುರಿ ತಲುಪಲು 157 ರನ್ ಬೇಕಾಗಿದೆ. ಕೆಎಲ್ ರಾಹುಲ್ 26 ರನ್ ಗಳಿಸಿ ಔಟಾಗಿದ್ದು, ರೋಹಿತ್ ಶರ್ಮಾ ಮತ್ತು ಚೇತೇಶ್ವರ ಪೂಜಾರ ತಲಾ 12 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
95 ರನ್ ಹಿನ್ನಡೆ ಅನುಭವಿಸಿದ್ದ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ 303 ರನ್ ಗೆ ಆಲೌಟ್ ಆಗಿತ್ತು. ಭಾರತದ ಪರ ವೇಗಿ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಗಳ ಗೊಂಚಲು ಪಡೆದರು. ಇಂದು ಕೊನೆಯ ದಿನವಾಗಿದ್ದು, ಭಾರತದ ಬ್ಯಾಟ್ಸ್ ಮನ್ ಗಳ ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಗೆಲುವು ಸಾಧ‍್ಯವಾಗಲಿದೆ.