Publish Date: Mon, 05 Mar 2018 (09:56 IST)
Updated Date: Mon, 05 Mar 2018 (09:58 IST)
ನವದೆಹಲಿ: ಶ್ರೀಲಂಕಾ ಮತ್ತು ಬಾಂಗ್ಲಾದೇಶವನ್ನೊಳಗೊಂಡ ತ್ರಿಕೋನ ಟಿ20 ಸರಣಿ ಆಡಲು ಟೀಂ ಇಂಡಿಯಾ ಶ್ರೀಲಂಕಾಗೆ ಪ್ರಯಾಣ ಬೆಳೆಸಿದೆ.
ನಾಳೆಯಿಂದ ಸರಣಿ ಆರಂಭವಾಗಲಿದೆ. ನಾಯಕ ವಿರಾಟ್ ಕೊಹ್ಲಿ, ಧೋನಿ ಮುಂತಾದ ಘಟಾನುಘಟಿ ಆಟಗಾರರ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡದ ನೇತೃತ್ವ ವಹಿಸಿದ್ದಾರೆ.
ಹಲವು ಯುವ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದ್ದು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಯುವ ಆಟಗಾರರಿಗೆ ಸೂಕ್ತ ವೇದಿಕೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಭಾರತ ಲಂಕಾವನ್ನು ಎದುರಿಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ