Publish Date: Fri, 04 May 2018 (09:24 IST)
Updated Date: Fri, 04 May 2018 (09:26 IST)
ನವದೆಹಲಿ: ಮೊನ್ನೆಯಷ್ಟೇ ಟೀಂ ಇಂಡಿಯಾ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂ.1 ಪಟ್ಟ ಉಳಿಸಿಕೊಂಡ ಶುಭ ಸುದ್ದಿ ಬಂದಿತ್ತು. ಆದರೆ ಏಕದಿನ ಕ್ರಿಕೆಟ್ ನಲ್ಲೂ ನಂ.1 ಆಗಿದ್ದ ಭಾರತದ ಪಟ್ಟವನ್ನು ಇಂಗ್ಲೆಂಡ್ ಕಸಿದುಕೊಂಡಿದೆ.
ಐಸಿಸಿಯ ಏಕದಿನ ಕ್ರಿಕೆಟ್ ವಾರ್ಷಿಕ ಪಟ್ಟಿಯಲ್ಲಿ ಇಂಗ್ಲೆಂಡ್ ಟೀಂ ಇಂಡಿಯಾವನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ. 125 ಅಂಕ ಗಳಿಸಿರುವ ಇಂಗ್ಲೆಂಡ್ ನಂ.1 ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾ 122 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
ಇನ್ನು ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಮೂರನೇ ಸ್ಥಾನದಲ್ಲಿದೆ. ಪಾಕಿಸ್ತಾನ ನಂ.1 ಸ್ಥಾನದಲ್ಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.