Webdunia - Bharat's app for daily news and videos

Install App

ಮಳೆ ಕಾಟದ ನಡುವೆ ಏಕದಿನ ಸರಣಿ ಸೋತ ಟೀಂ ಇಂಡಿಯಾ

Webdunia
ಬುಧವಾರ, 30 ನವೆಂಬರ್ 2022 (16:27 IST)
ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೇ ರದ್ದಾಗಿದೆ. ಇದರೊಂದಿಗೆ ಒಂದು ಪಂದ್ಯ ಗೆದ್ದಿರುವ ನ್ಯೂಜಿಲೆಂಡ್ ಸರಣಿ ತನ್ನದಾಗಿಸಿಕೊಂಡಿತು.

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಕಂಡಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 80 ರನ್ ಗಳಿಸುವಷ್ಟರಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾಗಿತ್ತು. ಇದೀಗ ಮೂರನೇ ಪಂದ್ಯದ ಎರಡನೇ ಇನಿಂಗ್ಸ್ ವೇಳೆ ಮಳೆ ಸುರಿಯಲಾರಂಭಿಸಿದ್ದು, ಪಂದ್ಯ ರದ್ದಾಗಿದೆ.

ಇಂದಿನ ಪಂದ್ಯದಲ್ಲಿ ಮತ್ತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 47.3 ಓವರ್ ಗಳಲ್ಲಿ 219 ರನ್ ಗಳಿಸಲಷ್ಟೇ ಶಕ್ತವಾಯಿತು. ಮಧ್ಯಮ ಕ್ರಮಾಂಕ ಸಂಪೂರ್ಣ ವೈಫಲ್ಯ ಅನುಭಸಿತು. ಶ್ರೇಯಸ್ ಅಯ್ಯರ್ 49 ವಾಷಿಂಗ್ಟನ್ ಸುಂದರ್ 51 ರನ್ ಗಳಿಸಿ ತಂಡಕ್ಕೆ ಗೌರವಯುತ ಮೊತ್ತ ಗಳಿಸಲು ನೆರವಾದರು. ಇಂದೂ ಸಂಜು ಸ್ಯಾಮ್ಸನ್ ಅವಕಾಶ ಪಡೆಯಲಿಲ್ಲ.  ಈ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ಮಳೆ ಬರುವಾಗ 18 ಓವರ್ ಆಟ ಪೂರ್ಣಗೊಳಿಸಿ 1 ವಿಕೆಟ್ ನಷ್ಟಕ್ಕೆ 104 ರನ್ ಗಳಿಸಿ ಸುಸ್ಥಿಯಲ್ಲಿತ್ತು. ಒಂದು ವೇಳೆ ಮಳೆ ಬಾರದೇ ಹೋಗಿದ್ದರೂ ಈ ಪಂದ್ಯವನ್ನು ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುತ್ತಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments