Publish Date: Tue, 09 Feb 2021 (10:29 IST)
Updated Date: Tue, 09 Feb 2021 (10:31 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ.
420 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿದೆ. ಇದೀಗಷ್ಟೇ 50 ರನ್ ಗಳಿಸಿದ ಶಬ್ನಂ ಗಿಲ್ ಆಂಡರ್ಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ಮರಳಿದರೆ ಅವರ ನಂತರ ಬಂದ ಅಜಿಂಕ್ಯಾ ರೆಹಾನೆ ಬಂದ ಶೂನ್ಯಕ್ಕೆ ನಿರ್ಗಮಿಸಿದ್ದಾರೆ. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ‍್ವರ ಪೂಜಾರ 15 ರನ್ ಗಳಿಸಿ ಔಟಾಗಿದ್ದಾರೆ. ಇದೀಗ ಭಾರತಕ್ಕೆ ನಾಯಕ ವಿರಾಟ್ ಕೊಹ್ಲಿಯೇ ಆಸರೆ. ಗೆಲುವು ಬಿಡಿ, ಸದ್ಯದ ಪರಿಸ್ಥಿತಿ ನೋಡಿದರೆ ಟೀಂ ಇಂಡಿಯಾಕ್ಕೆ ಡ್ರಾ ಮಾಡಿಕೊಳ್ಳುವುದೂ ಕಷ್ಟವಾಗಲಿದೆ.