Publish Date: Sun, 13 Aug 2023 (20:21 IST)
Updated Date: Sun, 13 Aug 2023 (20:22 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಮತ್ತು ಅಂತಿಮ ಟಿ20 ಹಣಾಹಣಿಯಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಆದರೆ ನಿನ್ನೆ ಅಬ್ಬರಿಸಿದ್ದ ಶುಬ್ನಂ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಇಂದು ಆರಂಭದಲ್ಲೇ ವಿಕೆಟ್ ಒಪ್ಪಿಸಿದ್ದು, ಟೀಂ ಇಂಡಿಯಾ ಸಂಕಷ್ಟದಲ್ಲಿದೆ. ಇತ್ತೀಚೆಗಿನ ವರದಿ ಬಂದಾಗ 4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿದೆ. ಜೈಸ್ವಾಲ್ 5, ಗಿಲ್ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.
ಇದೀಗ ಕ್ರೀಸ್ ನಲ್ಲಿ 7 ರನ್ ಗಳಿಸಿರುವ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮ ಖಾತೆ ತೆರೆಯದೇ ಬ್ಯಾಟಿಂಗ್ ಮಾಢುತ್ತಿದ್ದಾರೆ. ಭಾರತ ಇಂದಿನ ಪಂದ್ಯಕ್ಕೆ ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿದಿದೆ.