Webdunia - Bharat's app for daily news and videos

Install App

ಮೊದಲ ಟಿ20ಯಲ್ಲೇ ಟೀಂ ಇಂಡಿಯಾಗೆ ಮುಖಭಂಗ

Webdunia
ಶನಿವಾರ, 13 ಮಾರ್ಚ್ 2021 (08:49 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳ ಸೋಲನುಭವಿಸಿದೆ. ಇದರೊಂದಿಗೆ ಮೊದಲ ಪಂದ್ಯದಲ್ಲೇ ಮುಖಭಂಗ ಅನುಭವಿಸಿದೆ.

 

ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಹಿಟ್  ಮ್ಯಾನ್ ರೋಹಿತ್ ಶರ್ಮಾ ಇಲ್ಲದೇ ಕಣಕ್ಕಿಳಿದ ಟೀಂ ಇಂಡಿಯಾ ಆರಂಭದಿಂದಲೇ ಕುಸಿತ ಅನುಭವಿಸಿದೆ. ಶಿಖರ್ ಧವನ್ 4, ಕೆಎಲ್ ರಾಹುಲ್ 1 ರನ್ ಗೆ ಔಟಾದರೆ ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು.

ಬಳಿಕ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಐಯರ್ 67 ರನ್ ಸಿಡಿಸಿ ಭಾರತದ ಮಾನ ಕಾಪಾಡಿದರು. ರಿಷಬ್ ಪಂತ್ 21 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಮೊತ್ತವನ್ನು ಬೆನ್ನತ್ತಿದ ಇಂಗ್ಲೆಂಡ್ 15.3 ಓವರ್ ಗಳಲ್ಲೇ 2 ವಿಕೆಟ್ ಕಳೆದುಕೊಂಡು 130 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು. ಇಂಗ್ಲೆಂಡ್ ಪರ ಜೇಸನ್ ರಾಯ್ 49, ಜೋಸ್ ಬಟ್ಲರ್ 28, ಡೇವಿಡ್ ಮಲನ್ ಔಟಾಗದೇ 24, ಜಾನಿ ಬೇರ್ ಸ್ಟೋ ಅಜೇಯ 26 ರನ್ ಗಳಿಸಿದರು. ಭಾರತದ ಪರ ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್ ತಲಾ 1 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments