Publish Date: Wed, 01 Mar 2023 (09:00 IST)
Updated Date: Wed, 01 Mar 2023 (09:08 IST)
ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ನಿರೀಕ್ಷಿತ ಮತ್ತು ಇನ್ನೊಂದು ಅಚ್ಚರಿಯ ಬದಲಾವಣೆ ಮಾಡಿಕೊಂಡಿದೆ. ಕಳಪೆ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್ ಗೆ ವಿಶ್ರಾಂತಿ ನೀಡಲಾಗಿದ್ದು, ನಿರೀಕ್ಷೆಯಂತೇ ಶುಬ್ಮನ್ ಗಿಲ್ ಸ್ಥಾನ ಪಡೆದಿದ್ದಾರೆ.
ಇನ್ನೊಂದು ಅಚ್ಚರಿಯೆಂದರೆ ಫಾರ್ಮ್ ನಲ್ಲಿರುವ ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದ್ದು, ಮತ್ತೊಬ್ಬ ವೇಗಿ ಉಮೇಶ್ ಯಾದವ್ ಗೆ ಸ್ಥಾನ ನೀಡಲಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಅತ್ತ ಆಸ್ಟ್ರೇಲಿಯಾ ತಂಡವನ್ನು ಪ್ಯಾಟ್ ಕ್ಯುಮಿನ್ಸ್ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಮುನ್ನಡೆಸುತ್ತಿದ್ದಾರೆ.