Select Your Language

Notifications

webdunia
webdunia
webdunia
webdunia

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಫುಲ್ ಹಾಜರಾತಿ?

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಫುಲ್ ಹಾಜರಾತಿ?
ಬಾರ್ಬಡೋಸ್ , ಸೋಮವಾರ, 31 ಜುಲೈ 2023 (08:20 IST)
ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿರುವ ಟೀಂ ಇಂಡಿಯಾ ಮೂರನೇ ಏಕದಿನ ಪಂದ್ಯದಲ್ಲಿ ಪ್ರಬಲ ಪಡೆಯನ್ನೇ ಕಣಕ್ಕಿಳಿಸುವ ಸಾ‍ಧ‍್ಯತೆಯಿದೆ.

ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್, ಕೊಹ್ಲಿ ಆಡಿದ್ದರೂ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗಿತ್ತು. ಕೊಹ್ಲಿಗೆ ಬ್ಯಾಟಿಂಗ್ ಅವಕಾಶವೇ ಸಿಕ್ಕಿರಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಇಬ್ಬರೂ ಹಿರಿಯ ಆಟಗಾರರು ಆಡಿರಲಿಲ್ಲ.

ಆದರೆ ಈಗ ಸರಣಿ 1-1 ರಿಂದ ಸಮಬಲಗೊಂಡಿದ್ದು ಅಂತಿಮ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡವಿದೆ. ಹೀಗಾಗಿ  ಈಪಂದ್ಯದಲ್ಲಿ ಕೊಹ್ಲಿ, ರೋಹಿತ್ ಇಬ್ಬರೂ ತಮ್ಮ ನಿಗದಿತ ಕ್ರಮಾಂಕದಲ್ಲಿಯೇ ಆಡಬಹುದು. ಕಳೆದ ಎರಡೂ ಪಂದ್ಯಗಳಲ್ಲಿ ಕೊಹ್ಲಿ ಬ್ಯಾಟಿಂಗ್ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿರಲಿಲ್ಲ. ಈ ಪಂದ್ಯದಲ್ಲಾದರೂ ಕಿಂಗ್ ಕೊಹ್ಲಿಯ ಬ್ಯಾಟಿಂಗ್ ನೋಡುವ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿಗೆ ಬ್ರೇಸ್ ಲೆಟ್ ಉಡುಗೊರೆ ಕೊಟ್ಟ ಪುಟಾಣಿ ಅಭಿಮಾನಿ