ಸೆಂಚೂರಿಯನ್: ಮೊದಲ ಟೆಸ್ಟ್ ಪಂದ್ಯದಲ್ಲಿ ದ. ಆಫ್ರಿಕಾ ವಿರುದ್ಧ ಸೋತ ಬೆನ್ನಲ್ಲೇ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಶುಕ್ರವಾರದಿಂದ ಸೆಂಚೂರಿಯನ್ ನಲ್ಲಿ ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಭಾರೀ ತಯಾರಿ ನಡೆಸುತ್ತಿದೆ.
 
ಮೊದಲ ಟೆಸ್ಟ್ ನಲ್ಲಿ ಆಡದ ಅಜಿಂಕ್ಯಾ ರೆಹಾನೆ, ರವೀಂದ್ರ ಜಡೇಜಾ,  ಇಶಾಂತ್ ಶರ್ಮಾ ಇದೀಗ ನೆಟ್ಸ್ ನಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಬಿಸಿಸಿಐ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದೆ.
									
			
			 
 			
 
 			
			                     
							
							
			        							
								
																	ಹೀಗಾಗಿ ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ ನಿರೀಕ್ಷಿಸಬಹುದಾಗಿದೆ. ಮೂಲಗಳ ಪ್ರಕಾರ ರೋಹಿತ್ ಶರ್ಮಾಗೆ ಕೊಕ್ ಕೊಟ್ಟು ಅಜಿಂಕ್ಯಾ ರೆಹಾನೆಯನ್ನು ಕಣಕ್ಕಿಳಿಸುವ ಬಗ್ಗೆ ತಂಡ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಅಂತೂ ಮೊದಲ ಟೆಸ್ಟ್ ನಿಂದ ಪಾಠ ಕಲಿತಿರುವ ಟೀಂ ಇಂಡಿಯಾ ದ್ವಿತೀಯ ಪಂದ್ಯಕ್ಕೆ ಭಾರೀ ತಯಾರಿಯೊಂದಿಗೆ ಕಣಕ್ಕಿಳಿಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.
									
										
								
																	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ