ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ರಾಂಚಿಯಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಳ್ಳಲಿದೆ.
ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಯುವ ಆಟಗಾರರನ್ನೊಳಗೊಂಡ ಟೀಂ ಇಂಡಿಯಾದಲ್ಲಿ ಇಂದಿನ ಪಂದ್ಯದಲ್ಲಿ ಇಶಾನ್ ಕಿಶನ್ ಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಬೌಲಿಂಗ್ ನಲ್ಲಿ ಅಕ್ಸರ್ ಪಟೇಲ್ ಬದಲಿಗೆ ಯಜುವೇಂದ್ರ ಚಾಹಲ್ ಸ್ಥಾನ ಪಡೆಯಬಹುದು.
ಇನ್ನು, ನ್ಯೂಜಿಲೆಂಡ್ ಗೆ ಖಾಯಂ ನಾಯಕ ಕೇನ್ ವಿಲಿಯಮ್ಸನ್ ಅನುಪಸ್ಥಿತಿ ಕಾಡುತ್ತಿದೆ. ಕಳೆದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದರೂ ಅಂತಿಮ ಹಂತದಲ್ಲಿ ಬ್ಯಾಟಿಂಗ್ ಕೈ ಕೊಟ್ಟಿದ್ದು ಸೋಲಿಗೆ ಕಾರಣವಾಯಿತು. ಇಂದಿನ ಈ ಪಂದ್ಯ ಗೆದ್ದು ಸರಣಿ ಉಳಿಸಿಕೊಳ್ಳುವ ತವಕದಲ್ಲಿ ಪ್ರವಾಸಿಗರಿದ್ದಾರೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗುವುದು.