Select Your Language

Notifications

webdunia
webdunia
webdunia
webdunia

ಭಾರತ, ಬಾಂಗ್ಲಾದೇಶ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ ಇಲ್ಲಿದೆ ಡೀಟೈಲ್ಸ್

Team India

Krishnaveni K

ಕಾನ್ಪುರ , ಮಂಗಳವಾರ, 24 ಸೆಪ್ಟಂಬರ್ 2024 (11:17 IST)
ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೊನ್ನೆಯಷ್ಟೇ ಮೊದಲ ಟೆಸ್ಟ್ ಪಂದ್ಯ ಮುಕ್ತಾಯವಾಗಿದ್ದು, ಇದೀಗ ಎರಡನೇ ಪಂದ್ಯಕ್ಕೆ ತಂಡವನ್ನೂ ಘೋಷಣೆ ಮಾಡಲಾಗಿದೆ. ಈ ಪಂದ್ಯ ಎಲ್ಲಿ, ಯಾವಾಗ ನಡೆಯಲಿದೆ ಇಲ್ಲಿದೆ ಡೀಟೈಲ್ಸ್.

ಭಾರತ ಮತ್ತು ಬಾಂಗ್ಲಾದೇಶ ನಡುವೆ ಡಬ್ಲ್ಯುಟಿಸಿ ಸುತ್ತಿನ ಎರಡು ಟೆಸ್ಟ್ ಪಂದ್ಯಗಳ ಸರಣಿ ಆಯೋಜಿಸಲಾಗಿತ್ತು. ಈ ಪೈಕಿ ಮೊದಲ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿತ್ತು. ಈ ಪಂದ್ಯವನ್ನು ಭಾರತ 280 ರನ್ ಗಳಿಂದ ಗೆದ್ದುಕೊಂಡಿತ್ತು. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಹೆಚ್ಚು ಗೆಲುವು ದಾಖಲಿಸಿದ ದಾಖಲೆಯನ್ನೂ ಮಾಡಿತು.

ಇದೀಗ ಭಾರತ ಎರಡನೇ ಪಂದ್ಯಕ್ಕೆ ಸಿದ್ಧವಾಗಿದೆ. ಈ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಸೆಪ್ಟೆಂಬರ್ 27 ರಿಂದ ಸರಣಿಯ ಎರಡನೇ ಪಂದ್ಯ ನಡೆಯಲಿದೆ.  ಈ ಪಂದ್ಯಕ್ಕೆ ಟೀಂ ಇಂಡಿಯಾ ಘೋಷಣೆಯಾಗಿದ್ದು ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಈ ಪಂದ್ಯ ಅಕ್ಟೋಬರ್ 1 ರವರೆಗೆ ನಿಗದಿಯಾಗಿದೆ. ಇದಾದ ಬಳಿಕ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಅವಧಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ಸಿಗಲಿದೆ. ಅದಾದ ಬಳಿಕ ನ್ಯೂಜಿಲೆಂಡ್ ವಿರುದ್ಧ ಮತ್ತೆ ಟೆಸ್ಟ್ ಸರಣಿ ಆರಂಭವಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಬಾಂಗ್ಲಾದೇಶ ವಿರುದ್ಧ ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾ ಹೀಗಿದೆ