ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವಿನ ಕೇಕೆ ಹಾಕುವ ಮೂಲಕ ವಿಶ್ವದಲ್ಲಿಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ಅಗ್ರಸ್ಥಾನ ಪಡೆದಿದೆ.
ನ್ಯೂಜಿಲೆಂಡ್ ವಿರುದ್ಧ 2-0 ಗೆಲುವಿನ ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡ ವಿರಾಟ್ ಕೊಹ್ಲಿ ಪಡೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅವಿಸ್ಮರಣಿಯ ಸಾಧನೆ ಮಾಡಿದೆ. ಇದೀಗ ಪಾಕಿಸ್ತಾನ ತಂಡ ಎರಡನೇ ಸ್ಥಾನಕ್ಕೆ ಕುಸಿತ ಕಂಡಿದೆ.
ಪ್ರಥಮ ಇನ್ನಿಂಗ್ಸ್‌ನಲ್ಲಿ ಭಾರತ 316 ನ್ಯೂಜಿಲೆಂಡ್ 204 ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ 267 ನ್ಯೂಜಿಲೆಂಡ್ 197 ರನ್‌ಗಳಿಸಿತ್ತು. ನ್ಯೂಜಿಲೆಂಡ್ ತಂಡ 178 ರನ್‌ಗಳಿಂದ ಸೋಲನುಭವಿಸಿ ಪೆವಿಲಿಯನ್‌ಗೆ ಮರಳಿದೆ.
ದ್ವಿತಿಯ ಇನ್ನಿಂಗ್ಸ್‌ನಲ್ಲಿ ಭುವನೇಶ್ವರ್ ಕುಮಾರ್ 48 ರನ್‌ಗಳನ್ನು ನೀಡಿ ಐದು ವಿಕೆಟ್ ಕಬಳಿಸಿದರೆ, ಶಮಿ 70 ರನ್‌ಗಳನ್ನು ನೀಡಿ ಮೂರು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಜಡೇಜಾ 40 ರನ್‌ಗಳನ್ನು ನೀಡಿ ಒಂದು ವಿಕೆಟ್ ಕಬಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ