Publish Date: Fri, 24 Aug 2018 (08:54 IST)
Updated Date: Fri, 24 Aug 2018 (08:56 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಇದೀಗ ಮದ್ಯದ ಬಾಟಲಿ ಹಿಡಿದು ಪಾರ್ಟಿ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಆರಂಭಿಕ ಮುರಳಿ ವಿಜಯ್ ಮುಂದಿನ ಟೆಸ್ಟ್ ಪಂದ್ಯಗಳಿಗೆ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರಿಗೆ ಗುಂಡಿನ ಪಾರ್ಟಿ ನೀಡಿದ ಶಿಖರ್ ಧವನ್ ಆ ಫೋಟೋವನ್ನು ಟ್ವೀಟ್ ಮಾಡಿದ್ದರು.
ಇದು ಅಭಿಮಾನಿಗಳು ಮತ್ತು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದೆ. ಟೀಂ ಇಂಡಿಯಾ ಸಮವಸ್ತ್ರ ಧರಿಸಿಕೊಂಡು ಈ ರೀತಿ ಮದ್ಯಪಾನ ಮಾಡುವ ಫೋಟೋ ಪ್ರಕಟಿಸಿದ್ದನ್ನು ಅಭಿಮಾನಿಗಳು ಪ್ರಶ್ನಿಸುತ್ತಿದ್ದರೆ, ಬಿಸಿಸಿಐ ಕೆಂಡಾಮಂಡಲವಾಗಿದೆ. ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತಾ ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.