Publish Date: Tue, 05 Dec 2017 (08:45 IST)
Updated Date: Tue, 05 Dec 2017 (08:49 IST)
ನವದೆಹಲಿ: ದ. ಆಫ್ರಿಕಾದಲ್ಲಿ ನಡೆಯಲಿರುವ ಮೂರು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಏಕದಿನ ಸ್ಪೆಷಲಿಸ್ಟ್ ಗಳೂ ಆಯ್ಕೆಯಾಗಿದ್ದಾರೆ.
ಆಫ್ರಿಕಾದ ವೇಗದ ಪಿಚ್ ಗಳಲ್ಲಿ ಪೈಪೋಟಿ ನೀಡಲು ಟೀಂ ಇಂಡಿಯಾದ ಡೆತ್ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾರನ್ನೂ ಆಯ್ಕೆ ಮಾಡಲಾಗಿದ್ದು, ಹಿರಿಯ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಗೂ ಅವಕಾಶ ಕಲ್ಪಿಸಲಾಗಿದೆ. ಈ ತಂಡದ ವಿಶೇಷತೆಯೆಂದರೆ 17 ಸದಸ್ಯರ ತಂಡದಲ್ಲಿ 6 ವೇಗಿಗಳನ್ನು ಆಯ್ಕೆ ಮಾಡಲಾಗಿದೆ.
ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮುರಳಿ ವಿಜಯ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವೃದ್ಧಿಮಾನ್ ಸಹಾ, ರವಿಚಂದ್ರನ್ ಅಶ್ವಿನ್, ಅಜಿಂಕ್ಯಾ ರೆಹಾನೆ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಪಾರ್ಥಿವ್ ಪಟೇಲ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ